ಮಂಗಳೂರು: ಟಾಗೋರ್ ಪಾರ್ಕ್ ನಲ್ಲಿರುವ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ಕ್ವಿಟ್ ಇಂಡಿಯಾ ದಿನಾಚರಣೆ ರವಿವಾರ ಟಾಗೋರ್ ಪಾರ್ಕನಲ್ಲಿ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಕಾರ್ಪೊರೇಟರ್ ಎ. ಸಿ ವಿನಯರಾಜ್ ಅವರು ಧ್ವಜಾರೋಹಣ ಗೈದು ಕ್ವಿಟ್ ಇಂಡಿಯಾ ಚಳವಳಿಗೆ ಕರೆ ನೀಡಿ ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದ ಮಹಾತ್ಮ ಗಾಂಧಿಯವರ ನಾಯಕತ್ವದ ಬಗ್ಗೆ ವಿವರಿಸಿದರು.
ಸಭಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ . ಗಾಂಧಿ ಪ್ರತಿಮೆಗೆ ಮಾಲಾರ್ಪಣೆಗೆ ಗೈದು ಸ್ವಾತಂತ್ರ್ಯ ಹೋರಾಟದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ಪಾತ್ರದ ಬಗ್ಗೆ ವಿವರಿಸಿದರು.ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಾದಕ ವಸ್ತು ಮುಕ್ತನಾಡು ನನ್ನ ಪಾತ್ರ ಪ್ರಬಂಧ ಸ್ಪರ್ಧೆಯಲ್ಲಿ ದಯಾನಂದ ಪೈ ಸತೀಶ್ ಪೈ ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಭಟ್ ಪ್ರಥಮ,ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಕಾಲೇಜಿನ ವಿದ್ಯಾರ್ಥಿನಿ ರುಕ್ಸಾನ ದ್ವಿತೀಯ ಮತ್ತು ಕಾವೂರು ಬಿಜಿಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧನ್ವಿತಾ ತೃತೀಯ ಬಹುಮಾನ ಗಳಿಸಿದ್ದಾರೆ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ,ಸ್ಮರಣಿಜೆ,ನಗದು ಪುರಸ್ಕಾರ ನೀಡಲಾಯಿತು.
ಕಾಲೇಜು ವಿಭಾಗದ ಪ್ರಬಂಧ ಸ್ಪರ್ಧೆಯ ತೀರ್ಫುಗಾರರಾಗಿ ಪ್ರೊ.ಶಿವರಾಮಶೆಟ್ಟಿ, ಡಾ.ರಮೇಶ್ ಬಿ ,ಡಾ.ಅಮಿತಾ ಭಾಗವಹಿಸಿದ್ದರು.ಇತರ ವಿಭಾಗದ ತೀರ್ಪು ಗಾರರಾಗಿ ಸವಿತಾ ವೈ,ಗೀತಾ ಶೆಟ್ಟಿ ಹಾಗೂ ವಿಜಯ ಲಕ್ಷ್ಮಿ ಕಾರ್ಯನಿರ್ವಹಿಸಿದ್ದರು.
ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರಭಾಕರ ಶ್ರೀಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ ಇಸ್ಮಾಯಿಲ್ ಎನ್ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಕಲ್ಲೂರು ನಾಗೇಶ್ ಮತ್ತು ಉಷಾ ಎಂ ಕಾರ್ಯಕ್ರಮ ನಿರೂಪಿಸಿದರು.ಸಹ ಕೋಶಾಧಿಕಾರಿ ಪ್ರೇಮ್ ಚಂದ್ ವಂದಿ ಸಿದರು. ಜತೆ ಕಾರ್ಯದರ್ಶಿ ಎನ್ ಜಿ ಮೋಹನ್ ಉಪಸ್ಥಿತರಿದ್ದರು.