image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತುಂಬಿ ಹರಿಯುತ್ತಿರುವ ನೇತ್ರಾವತಿಗೆ ಭಕ್ತರಿಂದ ಬಾಗಿನ ಅರ್ಪಣೆ

ತುಂಬಿ ಹರಿಯುತ್ತಿರುವ ನೇತ್ರಾವತಿಗೆ ಭಕ್ತರಿಂದ ಬಾಗಿನ ಅರ್ಪಣೆ

ಉಜಿರೆ: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯು ಮೈದುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ಸೋಮವಾರ ಮುಂಜಾನೆ ಶ್ರೀಕ್ಷೇತ್ರದ ಪರಮಭಕ್ತರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಧರ್ಮಸ್ಥಳದ ಸ್ನಾನಘಟ್ಟದ ಬಳಿ ಶ್ರದ್ಧಾ-ಭಕ್ತಿಯಿಂದ ನೇತ್ರಾವತಿ ಮಾತೆಗೆ ಬಾಗಿನ ಅರ್ಪಿಸಿದರು. ಹಾಸನದ ಪ್ರಮುಖ ಧರ್ಮಸ್ಥಳ ಭಕ್ತರಾದ ಎಚ್. ವೈ. ಸೋಮಶೇಖರ್ ಅವರು ತಮ್ಮ ಕುಟುಂಬಸ್ಥರು ಹಾಗೂ ಆತ್ಮೀಯ ಬಳಗದೊಂದಿಗೆ ಕ್ಷೇತ್ರಕ್ಕೆ ಆಗಮಿಸಿ ಈ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು. ವರ್ಷದುದ್ದಕ್ಕೂ ಅನೇಕ ಬಾರಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸೋಮಶೇಖರ್ ಅವರು, ನೇತ್ರಾವತಿ ನದಿಯ ಜಲರಾಶಿ ಸಮೃದ್ಧವಾಗಿ ಹರಿಯುತ್ತಿರುವ ಈ ಸಂದರ್ಭದಲ್ಲಿ ಧಾನ್ಯ ಮತ್ತು ಮಂಗಳದ್ರವ್ಯಗಳನ್ನು ಒಳಗೊಂಡ ಬಾಗಿನವನ್ನು ಅರ್ಪಿಸಿ ಕೃತಜ್ಞತೆ ಸಲ್ಲಿಸಿದರು.

ಈ ಪೂಜಾ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಚಾಲಕಿ ಹಾಗೂ ಜನಜಾಗೃತಿ ವೇದಿಕೆಯ ಸದಸ್ಯರಾದ ಕಾಂಚನಮಾಲ, ನವಜೀವನ ಸಮಿತಿಯ ಪದಾಧಿಕಾರಿಗಳು, ಕಲಾವಿದರು ಹಾಗೂ ಶೌರ್ಯ ಪಡೆಗಳ ಮಹಿಳಾ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿ ನದಿ ಮಾತೆಗೆ ನಮಿಸಿದರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವಿ. ಶೆಟ್ಟಿ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಿದರು. ಮಳೆಗಾಲದಲ್ಲಿ ಧರ್ಮಸ್ಥಳದ ಸ್ನಾನಘಟ್ಟದ ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿರುವುದು ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಾವಿರಾರು ಯಾತ್ರಾರ್ಥಿಗಳಲ್ಲಿ ಸಂತಸ ಹಾಗೂ ಧಾರ್ಮಿಕ ಉಲ್ಲಾಸವನ್ನು ಹೆಚ್ಚಿಸಿದೆ.

Category
ಕರಾವಳಿ ತರಂಗಿಣಿ