ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು, ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹಷಿ೯ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದಭ೯ದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇ೯ಶಕ ಸುರೇಶ್ ಅಡಿಗ, ಮಂಗಳೂರು ದಕ್ಷಿಣ ಬಿಇಓ ಈಶ್ವರ್ ಹಾಗೂ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.