ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 'ಆಟಿಡೊಂಜಿ ದಿನ'ವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಾಂಸ್ಕೃತಿಕ ಕಾರ್ಯಕ್ರಮದ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಾದ ಭಾರತೀಯ ಸೇನೆಯ ಸಿ.ಆರ್.ಪಿ.ಎಫ್ 221ನೇ ಬೆಟಾಲಿಯನ್‌ನ ವಿ.ಎಸ್. ವಿಭಾಗದಲ್ಲಿ ಸೇವೆ ಸಲ್ಲಿಸಿದ ಕದ್ರಿಯ ನಿವಾಸಿ ಶ್ರೀಮತಿ ಅಹಲ್ಯಾ ಕುಲಾಲ್ ಹಾಗೂ ಸಮಾಜ ಸೇವಕಿ ಆಶಾ ನಾಗರಾಜ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಯತೀಶ್ ಆರ್ವರ್, ಜಿಲ್ಲಾ ಪದಾಧಿಕಾರಿಗಳಾದ ಪೂಜಾ ಪೈ, ಕವಿತಾ ಸನಿಲ್, ವಸಂತಿ ಮಚ್ಚಿನ ಸೇರಿದಂತೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಎಲ್ಲರನ್ನು ಸ್ವಾಗತಿಸಿದರು. ಸುದಾ ಸುರೇಶ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು ಹಾಗೂ ಮಹಿಳಾ ಮೋರ್ಚಾದ ಮತ್ತ ಒಬ್ಬ ಪ್ರಧಾನ ಕಾರ್ಯದರ್ಶಿ ಲಕಿತಾ ಆರ್ ಶೆಟ್ಟಿ ವಂದನಾರ್ಪಣೆಗೈದರು.