image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಂಪುಟ ಸಭೆ ಹೇಳಿಕೆ: ಸಿಎಂ ವಿರುದ್ಧ ಸಿ.ಟಿ.ರವಿ ವ್ಯಂಗ್ಯ

ಸಂಪುಟ ಸಭೆ ಹೇಳಿಕೆ: ಸಿಎಂ ವಿರುದ್ಧ ಸಿ.ಟಿ.ರವಿ ವ್ಯಂಗ್ಯ

ಬೆಂಗಳೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಸಚಿವರಿಗೆ ಭ್ರಷ್ಟಾಚಾರ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಹೇಳಬೇಕಿತ್ತು. ಆದರೆ ಸಿಕ್ಕಿಬೀಳದಂತೆ ಎಚ್ಚರಿಕೆ ವಹಿಸಿ ಎಂದಂತೆ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಟೀಕಿಸಿದ್ದಾರೆ. ಇದು ನಿಪುಣ ಕಳ್ಳನು ತನ್ನ ಸಹಚರರಿಗೆ ಕಳ್ಳತನದ ಪಾಠ ಮಾಡಿದಂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕತೆಯ ಬಗ್ಗೆ ಬೋಧನೆ ಮಾಡಲು ಈ ಸರ್ಕಾರಕ್ಕೆ ಯಾವುದೇ ನೈತಿಕತೆಯಿಲ್ಲ ಎಂದು ಆರೋಪಿಸಿದರು. ಇದೇ ವೇಳೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸುತ್ತಿರುವ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಧೋರಣೆಯನ್ನು ಖಂಡಿಸಿದ ಅವರು, ನಕಲಿ ಮತಗಳ ಶುದ್ಧೀಕರಣ ಪ್ರಕ್ರಿಯೆಯನ್ನು ವಿರೋಧಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದರು. ಚುನಾವಣೆಯಲ್ಲಿ ಗೆದ್ದಾಗ ಜನಾದೇಶ ಎನ್ನುವ ವಿರೋಧ ಪಕ್ಷಗಳು, ಸೋತಾಗ ಇವಿಎಂ ದೋಷ ಎನ್ನುತ್ತವೆ ಎಂದು ಟೀಕಿಸಿದರು.

Category
ಕರಾವಳಿ ತರಂಗಿಣಿ