ಪುತ್ತೂರು : ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಎತ್ತರ ಜಿಗಿತದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಕೆಮ್ಮಾಯಿಯ ಶೋಭಾ ದಂಪತಿಯ ಪುತ್ರರಾದ ಇವರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ಅವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.